
ಜನವರಿಯಲ್ಲಿ ಅಪ್ಪಳಿಸಲಿದೆ ಎರಡನೇ ಅಲೆ?
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜನವರಿ-ಫೆಬ್ರವರಿ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಯಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜನವರಿಯಿಂದ ಕೊರೊನಾ ಎರಡನೇ ಅಲೆ ಆರಂಭವಾಗಲಿದೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಿದೆ. ಮದುವೆ, ಇನ್ನಿತರ ಸಮಾರಂಭಗಳಿಗೆ ನೂರಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ರಾಜಕೀಯ ಕಾರ್ಯಕ್ರಮಗಳಿಗೆ 200 ಜನರಿಗೆ ಮಿತಿ ಹೇರಲಾಗಿದೆ ಎಂದು ತಿಳಿಸಿದರು.
ಮುಂದಿನ 45 ದಿನ ರಾಜ್ಯಕ್ಕೆ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ನೈಟ್ ಕರ್ಫ್ಯೂ ಜಾರಿ ಸಧ್ಯಕ್ಕೆ ಪ್ರಸ್ತಾಪವಿಲ್ಲ, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ