Kannada NewsKarnataka NewsLatest

ಕೊರೋನಾ:  ಮುಖ್ಯಮಂತ್ರಿಗಳ ಪ್ರವಾಸ ರದ್ದು 

ಪೂರ್ವ ಭಾವಿ ಸಭೆ
 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಏಪ್ರೀಲ್ 14  ರಂದು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 129 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಆಡಳಿತ ವತಿಯಿಂದ ಆಚರಿಸುವ ಕುರಿತು ಮಾರ್ಚ 18 ರಂದು ಮಧ್ಯಾಹ್ನ   3:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ 2 ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಾಗೂ ಇತರೆ ವರ್ಗಗಳ ಸಮುದಾಯದ ಮುಖಂಡರು ಪದಾಧಿಕಾರಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಉದ್ಘಾಟನಾ ಸಮಾರಂಭ ಮುಂದೂಡಿಕೆ
 ಮಾರ್ಚ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಪ್ರಾಂತೀಯ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ  ಕಾರ್ಯಕ್ರಮವನ್ನು ಕೊರೋನಾ ವೈರಸ್  ಕಾಯಿಲೆಯ ನಿಮಿತ್ಯ ಹಾಗೂ ಕರ್ನಾಟಕ ಸರ್ಕಾರದ ಆದೇಶದಂತೆ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮುಖ್ಯಕಾರ್ಯ ನಿರ್ವಹಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
   
ಮುಖ್ಯಮಂತ್ರಿಗಳ ಪ್ರವಾಸ ರದ್ದು
ಕರೋನಾ ವೈರಸ್  ಮುಂಜಾಗ್ರತೆ ಕ್ರಮವಾಗಿ ಸಾರ್ವಜನಿಕರು ಸೇರುವ ಎಲ್ಲಾ ಕಾರ್ಯಕ್ರಮ ರದ್ದು ಪಡಿಸಬೇಕೆಂಬ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು‌  
ಮಾರ್ಚ 15 ಮತ್ತು 16 ರಂದು ಕೈಗೊಳ್ಳಲಿರುವ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಯ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯ ಮಂತ್ರಿಗಳ ವಿಶೇಷ  ಕರ್ತವ್ಯ ಅಧಿಕಾರಿ ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಬಿ.ಪಿ ಚನ್ನಬಸವೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button