ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ಕೋವಿಡ್ ಪ್ರಕರಣ ಆರು ಸಾವಿರ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.
ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಲಾಕ್ ಡ್ ಸಮಿತಿ ಇಂತದ್ದೊಂದು ಸಲಹೆ ನೀಡಿದೆ. ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಮಿತಿ ಮೀರುತ್ತಿದ್ದು, ಕೊರೊನಾ ಚೈನ್ ಲಿಂಕ್ ಕಟ್ ಮಾಡಬೇಕೆಂದರೆ 10 ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದೆ.
ಇದಕ್ಕೆ ಸಚಿವ ಸುಧಾಕರ್, ಸಧ್ಯದ ಸ್ಥಿತಿಯಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯವಿಲ್ಲ. ಹಾಗಾಗಿ ಪರ್ಯಾಯ ಸಲಹೆ ನೀಡುವಂತೆ ಕೇಳಿದ್ದಾರೆ. ಪ್ರಸ್ತುತ ಇರುವ ಕೊರೊನಾ ಕರ್ಫ್ಯೂ ಮುಗಿದ ಬಳಿಕ ಪರಿಸ್ಥಿತಿ ಹೀಗೇಯೇ ಮುಂದುವರೆದರೆ ಲಾಕ್ ಡೌನ್ ಉತ್ತಮ ಎಂದಿದ್ದಾರೆ. ಅಲ್ಲದೇ ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಇಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದೆ. ಆದರೆ ಸರ್ಕಾರ ಲಾಕ್ ಡೌನ್ ಜಾರಿ ಸಾಧ್ಯವಿಲ್ಲ ಎಂದು ಹೇಳಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಬಿಜೆಪಿಯವರಿಗೆ ಸಿಂಹಸ್ವಪ್ನ: ಮಲ್ಲಿಕಾರ್ಜುನ ಖರ್ಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ