Latest

ಶನಿವಾರದಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ 8 ಜಿಲ್ಲಾ ಕೇಂದ್ರಗಳಲ್ಲಿ ಶನಿವಾರದಿಂದ (ಏ.10) ಏಪ್ರಿಲ್ 20ರ ವರೆಗೆ ಕೊರೋನಾ ಕರ್ಫ್ಯೂ ವಿಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದರು.

ಬೆಂಗಳೂರು ನಗರ, ಮೈಸೂರು, ತುಮಕೂರು, ಉಡುಪಿ, ಮಂಗಳೂರು, ಬೀದರ್, ಕಲಬುರಗಿ, ಮಣಿಪಾಲ್ ಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಈ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಯಾಗಲಿದೆ. ಆದರೆ ಅಗತ್ಯ ಸೇವೆಗಳಿಗೆ ತೊಂದರೆ ಇಲ್ಲ.

ಆರೋಗ್ಯ ಸಚಿವ ಸುಧಾಕರ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಮುಖ್ಯವಾಗಿ ವಾಣಿಜ್ಯ ಉದ್ದೇಶಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದರು.

ರಾಜ್ಯದ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ಸಾಧ್ಯತೆ

ಪ್ರಧಾನಮಂತ್ರಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು

Highlights of the PM Video Conference with Chief Ministers -Night Corona Curfew

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button