ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ದಿಢೀರ್ ಮಾರ್ಗಸೂಚಿ ಬದಲಿಸಿ, ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ರಾಜ್ಯಾದ್ಯಂತ ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ. ಅಂಗಡಿ ಮುಂಗಟ್ಟುಗಳು, ಮಾರ್ಕೆಟ್, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್, ಧಾರ್ಮಿಕ ಕೇಂದ್ರಗಳು ಸೇರಿದಂತೆ ಸಂಪೂರ್ಣ ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ.
ಹೊಸ ನಿಯಮ ಜಾರಿಯಾಗುತ್ತಿದ್ದಂತೇಯೇ ಫೀಲ್ಡಿಗಿಳಿದ ಪೊಲೀಸರು ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ ಅಂಗಡಿ ಹೊರತುಪಡಿಸಿ ರಸ್ತೆ ಬದಿ ವ್ಯಾಪಾರ, ಅಂಗಡಿ ಮುಂಗಟ್ಟು ಸೇರಿದಂತೆ ಪ್ರತಿಯೊಂದು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
ಸರಕಾರದಿಂದ ದಿಢೀರ್ ಲಾಕ್ ಡೌನ್ ಮಾದರಿ ಹೊಸ ಮಾರ್ಗಸೂಚಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ