ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ನಿಯಂತ್ರಣ ಮತ್ತು ಸೋಂಕಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ತಮ್ಮ ಮೊದಲ ಆದ್ಯತೆ ಎಂದು ಬೆಳಗಾವಿಯ ನೂತನ ಸಂಸದೆ ಮಂಗಲಾ ಅಂಗಡಿ ತಿಳಿಸಿದ್ದಾರೆ.
ಅಧಿಕಾರಿಗಳ ಮೊದಲ ಸಭೆಗೆ ಮುನ್ನ ಪ್ರಗತಿವಾಹಿನಿ ಜೊತೆ ಮಾತನಾಡಿದ ಅವರು, ಕೊರೋನಾ ಬಹಳ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಅದನ್ನು ನಿಯಂತ್ರಿಸುವ ಸಂಬಂಧ ಮತ್ತು ಸೋಂಕಿತರಿಗೆ ಬೆಡ್, ಆಕ್ಸಿಜನ್ ಸೇರಿದಂತೆ ವಿವಿಧ ವ್ಯವಸ್ಥೆ ಕಲ್ಪಿಸುವ ಸಂಬಂಧ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಎಲ್ಲಕ್ಕಿಂತ ಮೊದಲು ಮಾಡಬೇಕಾದ ಕೆಲಸ ಇದು ಎಂದು ಮಂಗಲಾ ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಕೊರೋನಾ ಕೇರ್ ಸೆಂಟರ್ ಆರಂಭಿಸುತ್ತಿದ್ದಾರೆ. ಅದಕ್ಕೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು. ಹೆಚ್ಚಿನ ಸೆಂಟರ್ ಆರಂಭಿಸುವ ಕುರಿತು ಸಾಧ್ಯವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಸ್ಮಾರ್ಟ್ ಸಿಟಿ ಯೋಜನೆಯ ಕೆಲಸಗಳ ಕುರಿತು ಪರಾಮರ್ಶೆ ನಡೆಸಲಾಗುವುದು. ಆದಷ್ಟು ಬೇಗ ಕೆಲಸ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಲಾ ಅಂಗಡಿ ತಿಳಿಸಿದರು.
ಬಿಜೆಪಿಯ 3 ಲಕ್ಷ ಮತದಾರರು ಎಲ್ಲಿ ಹೋದರು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ