Latest

ಒಂದೇ ಸಂಸ್ಥೆಯ 21 ವಿದ್ಯಾರ್ಥಿಗಳಿಗೆ, ಇಬ್ಬರು ಉಪನ್ಯಾಸಕರಿಗೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಯಲ್ಲಾಪುರ ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ.
ಕೆಲವು ದಿನಗಳ ಹಿಂದೆ 10ನೇ ತರಗತಿಯ ಓರ್ವ ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 123 ಜನರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಸಂಸ್ಥೆಯಲ್ಲಿ ಕನ್ನಡ ಪ್ರೌಢಶಾಲೆಯ ಆವರಣ ಪ್ರತ್ಯೇಕವಾಗಿದೆ. ಹಾಗಾಗಿ ಸಮೀಪದಲ್ಲಿರುವ ಇಂಗ್ಲಿಷ್ ಮಾಧ್ಯಮ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ.‌
ಈ ಕುರಿತು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದವರ ಗಂಟಲು ದ್ರವವನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗುವುದು. ಇತರ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಮಂಗಳವಾರ ಪರೀಕ್ಷೆ ಮಾಡಲಾಗುವುದು. ಶಿಕ್ಷಣ ಸಂಸ್ಥೆಯನ್ನು ಸೀಲ್‌ಡೌನ್ ಮಾಡುವ ಕುರಿತು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button