ಪ್ರಗತಿವಾಹಿನಿ ಸುದ್ದಿ, ಶಿರಸಿ – ಇಲ್ಲಿಯ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯದ 12 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದಾಗಿ ಇಡೀ ದೇವಸ್ಥಾನವನ್ನು ಸೆನಿಟೈಸ್ ಮಾಡಲಾಗಿದೆ.
ದೇವಸ್ಥಾನಕ್ಕೆ ಸೋಂಕಿತ ವ್ಯಕ್ತಿಯೊಬ್ಬ ಬಂದು ಹೋಗಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಸೀಲ್ ಡೌನ್ ಮಾಡಿ, ಸಿಬ್ಬಂದಿಯನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು. ಅವರನ್ನೆಲ್ಲ ಪರೀಕ್ಷೆಗೆ ಒಳಪಡಿಸಿದಾಗ 12 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಆರಂಭದಲ್ಲೇ ಅವರನ್ನೆಲ್ಲ ಕ್ವಾರಂಟೈನ್ ನಲ್ಲಿಟ್ಟಿದ್ದರಿಂದ ಹೆಚ್ಚಿನವರೊಂದಿಗೆ ಅವರು ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇಲ್ಲ. ಆದಾಗ್ಯ ದೇವಾಲಯದ ಅಧ್ಯಕ್ಷ ಸೇರಿದಂತೆ ಎಲ್ಲ ಧರ್ಮದರ್ಶಿಗಳು, ಸಿಬ್ಬಂದಿ ಕ್ವಾರಂಟೈನ್ ನಲ್ಲಿದ್ದಾರೆ.
ಶಿರಸಿಯಲ್ಲಿ ಇಂದು ಒಂದೇ ದಿನ 24 ಜನರಲ್ಲಿ ಸೋಂಕು ಕಾಣಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 33 ಜನರಿಗೆ ಸೋಂಕು ದೃಢಪಟ್ಟಿದೆ. ಆರಂಭದಲ್ಲಿ ಭಟ್ಕಳ ಹೊರತುಪಡಿಸಿ ಜಿಲ್ಲೆಯ ಬೇರೆಲ್ಲೂ ಸೋಂಕು ಕಾಣಿಸಿರಲಿಲ್ಲ. ಆದರೆ ಈಗ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಜನರು ಸೋಂಕಿತರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ