Karnataka NewsLatest
ಸಿಎಂ ಯಡಿಯೂರಪ್ಪಗೂ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ.
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. ಆದರೆ ಈಗ ಪಾಸಿಟಿವ್ ಬಂದಿದೆ.




