Kannada NewsKarnataka NewsLatest

ಶಶಿಕಲಾ ಜೊಲ್ಲೆಗೆ ಕೊರೋನಾ: ಹೋಮ್ ಕ್ವಾರಂಟೈನ್

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರ ಸಲಹೆಯ ಮೇರೆಗೆ 14 ದಿನ ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.

Home add -Advt

ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆಯಂತೆ 14 ದಿನ ಹೋಮ್ ಕ್ವಾರಂಟೈನ್ ಆಗಲಿದ್ದೇನೆ. ನನ್ನೊಡನೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ಆರೋಗ್ಯ ಸ್ಥಿರವಾಗಿದೆ. ಆದಷ್ಟು ಶೀಘ್ರ ಸೇವೆಗೆ ಮರಳಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

 

Related Articles

Back to top button