
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಫೇಸ್ ಬುಕ್ ನಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವುದಾಗಿಯೂ, ಆದಷ್ಟು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದೂ ಅವರು ತಿಳಿಸಿದ್ದಾರೆ.
ತಮ್ಮನ್ನು ಈಚೆಗೆ ಭೇಟಿ ಮಾಡಿದವರೆಲ್ಲ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸುಮಲತಾ ಜನರಿಗೆ ವಿನಂತಿಸಿದ್ದಾರೆ.