2 ಜಿಲ್ಲೆಗಳಲ್ಲಿ 2ನೇ ಅಲೆಯಲ್ಲೇ ಮಕ್ಕಳ ಮೇಲೆ ಕೊರೋನಾ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎನ್ನುವ ಸುದ್ದಿಯ ಮಧ್ಯೆಯೇ ಆತಂಕಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ 2ನೇ ಅಲೆಯಲ್ಲೇ ಅಪಾರ ಸಂಖ್ಯೆಯ ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿಯ ಜೊತೆಗೆ ಇದೀಗ ಕರ್ನಾಟಕದಲ್ಲೂ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 2ನೇ ಅಲೆಯ ಸಂದರ್ಭದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಕೊರೋನಾ ಸೋಂಕು ತಗುಲಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2ನೇ ಅಲೆಯ ವೇಳೆ 12 ಸಾವಿರ ಮಕ್ಕಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 6 ಸಾವಿರ ಮಕ್ಕಳಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಈ ಬಾರಿ ಇದರ ಎರಡುಪಟ್ಟು ಮಕ್ಕಳಿಗೆ ಸೋಂಕು ತಗುಲಿದೆ.

ಅದೇ ರೀತಿ ಕೊಡಗು ಜಿಲ್ಲೆಯಲ್ಲಿ ಸಹ ಕೊರೋನಾ ಸೋಂಕಿತ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, 2ನೇ ಅಲೆ ಮುಗಿಯುವ ಹಂತದಲ್ಲಿ ಸೋಂಕಿಗೆ ಒಳಗಾಗುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗಿಲ್ಲ.

2ನೇ ಅಲೆಯಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಇನ್ನು 3ನೇ ಅಲೆಯಲ್ಲಿ ಪರಿಸ್ಥಿತಿ ಹೇಗಿರಬಹುದು ಎನ್ನುವ ಆತಂಕ ಹೆಚ್ಚಿದೆ. ಈಗಿಂದಲೇ ಎಚ್ಚರಿಕೆ ಅಗತ್ಯ ಎನ್ನುವ ಸಂದೇಶ ನೀಡಿದಂತಾಗಿದೆ.

3ನೇ ಅಲೆ ಭೀತಿ; ಮಕ್ಕಳಲ್ಲಿ ಕೊರೊನಾ ತಡೆಯುವುದು ಹೇಗೆ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button