Karnataka NewsLatest
ಜೊಲ್ಲೆ ಮಕ್ಕಳಿಬ್ಬರಿಗೂ ಕೊರೋನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಅವರ ಇಬ್ಬರು ಮಕ್ಕಳಿಗೂ ಪಾಸಿಟಿವ್ ಬಂದಿದೆ.
ಬಸವಪ್ರಸಾದ ಜೊಲ್ಲೆ ಮತ್ತು ಜ್ಯೋತಿಪ್ರಸಾದ ಜೊಲ್ಲೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸಂಸದ ಅಣ್ಣಾ ಸಾಹೇಬ ಜೊಲ್ಲೆ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಆದರೆ ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ.
ಎಲ್ಲರೂ ಮನೆಯಲ್ಲೇ ಇದ್ದು ಸ್ವಯಂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗತ್ಯವಾದಾಗ ವೈದ್ಯರ ಸಲಹೆಯನ್ನು ಮಾತ್ರ ಪಡೆಯುತ್ತಿದ್ದಾರೆ.
ಮೂವರಿಗೂ ಯಾವುದೇ ಲಕ್ಷಣಗಳಿಲ್ಲದ ಸೋಂಕು ಪತ್ತೆಯಾಗಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.
ಶಶಿಕಲಾ ಜೊಲ್ಲೆಗೆ ಕೊರೋನಾ: ಹೋಮ್ ಕ್ವಾರಂಟೈನ್


