ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ ಕಾಣಿಸಿದೆ. ಆದರೆ ಅವರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ.
ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದಾರೆ. ಸಚಿವರು, ಸಂಸದರು, ಶಾಸಕರು ಎಲ್ಲರಿಗೂ ಈಗ ಆತಂಕ ಶುರುವಾಗಿದೆ. ಅವರೆಲ್ಲರೂ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿದೆ. ಜೊತೆಗೆ ಅವರ ಚಾಲಕರು, ಸಹಾಯಕರು ಸಹ ಆತಂಕಕ್ಕೊಳಗಾಗಿದ್ದಾರೆ.
ಕಾಡಾ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಬೈಲಹೊಂಗಲದ ವಿಶ್ವನಾಥ ಪಾಟೀಲ ಅವರಿಗೆ 3 -4 ದಿನದ ಹಿಂದೆಯೇ ಕೊರೋನಾ ಪಾಸಿಟಿವ್ ಬಂದಿದೆ. ಅವರು ಹೋಮ್ ಐಸೋಲೇಶನ್ ನಲ್ಲಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ