ಆತ್ಮೀಯರೆ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.I have tested positive for #COVID19 . As I am asymptomatic, as per doctor's advise I am in home quarantine.
— Pralhad Joshi (@JoshiPralhad) October 7, 2020
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣ ಇರುವುದಿಲ್ಲ. ವೈದ್ಯರ ಸಲಹೆಯಂದೆ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿ ನಿನ್ನೆಯಷ್ಟೆ ಬೆಳಗಾವಿಗೆ ಬಂದು ಹೋಗಿದ್ದಾರೆ. ಈಚೆಗೆ ನಿಧನಾಗಿರುವ ಕೇಂದ್ರ ಸಚಿವ ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಹೋಗಿದ್ದಾರೆ.
ನಂತರ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೊದಲಾದವರು ಇದ್ದರು. ಈಗ ಎಲ್ಲರಿಗೂ ಆತಂಕ ಶುರುವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ