ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಮಹಾಮಾರಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈಗಷ್ಟೇ ಶಾಲೆಗಳು ಆರಂಭವಾಗಿತ್ತಿರುವ ಬೆನ್ನಲ್ಲೇ ಮತ್ತೆ ಕೋವಿಡ್ ಶುರುವಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ದಾಸರಹಳ್ಳಿ ವಲಯದ 2 ಶಾಲೆಗಳಲ್ಲಿ ಸುಮಾರು 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಪಿಣ್ಯ ಎರಡನೇ ಹಂತದಲ್ಲಿರುವ ಖಾಸಗಿ ಶಾಲೆಯ 6ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಹಾಗೂ ರಾಜಗೋಪಾಲನಗರದ ಖಾಸಗಿ ಶಾಲೆಯ 4 ಹಾಗೂ 5ನೇ ತರಗತಿಯ ಒಟ್ಟು 31 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಜೂನ್ 9ರಂದು ಎರಡೂ ಶಾಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದ್ದು, ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ ಮಕ್ಕಳು ಹಾಗೂ ಶಿಕ್ಷಕರು, ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಸೂಚಿಸಲಾಗಿದೆ.
ಭಾರಿ ಮಳೆಯಿಂದ ಭೂಕುಸಿತ; ನಾಲ್ವರು ಜೀವಂತ ಸಮಾಧಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ