Latest

ಸಚಿವ ಎಸ್.ಟಿ ಸೋಮಶೇಖರ್ ಹೋಂ ಕ್ವಾರಂಟೈನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಸಚಿವರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39 ರಲ್ಲಿ ಆಪ್ತ ಸಹಾಯಕ ಸಿಬ್ಬಂದಿಯೊಬ್ಬರಿಗೆ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಸಚಿವಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಸಚಿವರಾದ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಸಹ ಕೊರೋನಾದಿಂದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದೀಗ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೋನಾ ದೃಢಪಟ್ಟಿದ್ದು, ಸಚಿವರನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button