ಕೊರೋನಾ ಗಂಭೀರತೆ: ತುರ್ತು ಸಭೆ ಕರೆದ ರಾಜ್ಯಪಾಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಂಗಳವಾರ ತುರ್ತು ಸಭೆ ಕರೆದಿದ್ದಾರೆ.

ಮಂಗಳವಾರ ಸಂಜೆ 4.30ಕ್ಕೆ ವರ್ಚ್ಯುವಲ್ ಮೀಟಿಂಗ್ ನಡೆಯಲಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್ ಸ್ಪೀಕರ್, ಮುಖ್ಯಮಂತ್ರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ತಜ್ಞರು  ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕೊರೋನಾದ ಸಧ್ಯದ ಪರಿಸ್ಥಿತಿ ಮತ್ತು ರಾಜ್ಯ ಸರಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದೇ ವೇಳೆ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಬಿಡುಗಡೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ನಾಳೆಯಿಂದ ರಾಜ್ಯ ಅರ್ಧ ಬಂದ್; ಮೇ 3ರ ವರೆಗೆ ಕರ್ಫ್ಯೂ?

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ರಮ ತೆಗೆದುಕೊಂಡಿದ್ದು, ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗುವ ಸಾಧ್ಯತೆ ಇದೆ.

ನಾಳೆಯಿಂದ ಮೇ 3ರ ವರೆಗೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರಿಗೆ ನಿರ್ಬಂಧ ಜಾರಿಯಾಗಲಿದೆ ಎನ್ನಲಾಗುತ್ತಿದೆ.

ನಾಳೆಯಿಂದ ಮೇ 3ರ ವರೆಗೆ ಶಾಲೆ, ಕಾಲೇಜುಗಳು ಬಂದ್ ಆಗಲಿವೆ. ಸಿನೇಮಾ ಥಿಯೇಟರ್, ಬಾರ್ ಮೊದಲಾವುಗಳು ಬಂದ್ ಆಗಲಿವೆ. ಸಾರ್ವಜನಿಕ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲವಾದರೂ ಅನವಶ್ಯಕ ಓಡಾಟದ ಮೇಲೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಗೊತ್ತಾಗಿದೆ.

ನಾಳೆ ಮುಖ್ಯಮಂತ್ರಿಗಳು ಪ್ರಮುಖರ ಸಭೆ ನಡೆಸಿದ ನಂತರ ಹೊಸ ರೂಲ್ಸ್ ಪ್ರಕಟವಾಗಲಿದೆ.

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button