ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿರುವುದರಿಂದ ಗಡಿ ಭಾಗದ ಜನರ ಅನುಕೂಲಕ್ಕಾಗಿ ಶೀಘ್ರದಲ್ಲೇ ಚಿಕ್ಕೋಡಿಯಲ್ಲಿ ಕೊರೋನಾ ವೈರಸ್ ಟೆಸ್ಟಿಂಗ್ ಲ್ಯಾಬ್ ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಬುಧವಾರ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೋನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ 21 ದಿನ ಲಾಕ್ ಡೌನ್ ಮಾಡುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಜೊಲ್ಲೆ ಚರ್ಚೆ ನಡೆಸಿದರು.
ಅಧಿಕಾರಿಗಳು ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕಠಿಣ ಕ್ರಮ ತೆಗೆದುಕೊಳಳಬೇಕು. ಜನರಿಗೆ ತಿಳಿವಳಿಕೆ ನೀಡುವ ಕೆಲಸವೂ ಆಗಬೇಕು. ಸರಕಾರದ ನಿಯಮಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚು ಜನರು ಒಂದೆಡಜೆ ಸೇರದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ