Latest

ಜಿಲ್ಲಾಧಿಕಾರಿಗೆ ಕೊರೋನಾ; ಹೋಂ ಕ್ವಾರಂಟೈನ್

ಪ್ರಗತಿವಾಹಿನಿ ಸುದ್ದಿ, ಕಾರವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೋಮವಾರ ಕೋವಿಡ್ ಸೋಂಕು ಖಚಿತಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಕೊರೋನಾ ನಿಯಂತ್ರಣ ಕ್ರಮಗಳ ನಿಮಿತ್ಯ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು.  ಕಾರವಾರ ಮೆಡಿಕಲ್ ಕಾಲೇಜಿನ ಆರ್ ಟಿಪಿಸಿಆರ್ ಲ್ಯಾಬ್ ನಲ್ಲಿ ಗಂಟಲು ದ್ರವದ ಮಾದರಿ ಪರೀಕ್ಷೆಯನ್ನು ನಡೆಸಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಆದರೆ ಅವರಿಗೆ ಯಾವುದೇ ಕೊರೋನಾ ಲಕ್ಷಣಗಳಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button