ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನುವ ವಿಷಯ ಇದೀಗ ಟ್ವೀಟರ್ ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳನ್ನು ರಾಜಕೀಯ ಪಕ್ಷಗಳು ಎಷ್ಟು ಕೀಳುಮಟ್ಟಕ್ಕಿಳಿಸಿವೆ ಎನ್ನುವುದಕ್ಕೆ ಉದಾಹರಣೆಯಂತಿದೆ.
ಸೋನಿಯಾ ಗಾಂಧಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನುವುದು ನಿನ್ನೆ ಸುದ್ದಿಯಾಯಿತು. ಅವರು ಆಸ್ಪತ್ರೆಗೂ ದಾಖಲಾಗಿದ್ದಾರೆ ಎನ್ನುವ ಸಂಗತಿ ಮಾಧ್ಯಮಗಳಲ್ಲಿ ಪ್ರಕಟವಾಯಿತು.
ಇದಕ್ಕೆ ಟ್ವೀಟ್ ಮಾಡಿರುವ @BJP4Karnataka , ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟೀಸ್ ನೀಡಿದ ಒಂದೇ ದಿನದಲ್ಲಿ ಸೋನಿಯಾ ಗಾಂಧಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರು ಆದಷ್ಟು ಬೇಗ ಗುಣಮುಖರಾಗಿ ಇಡಿ ಮುಂದೆ ಹಾಜರಾಗಲಿ ಎಂದು ಹಾರೈಸುತ್ತೇವೆ ಎಂದು ವ್ಯಂಗ್ಯವಾಡಿದೆ.
CONgress President Sonia Gandhi has tested #COVID19 positive, one day after the summons issued to her by the Enforcement Directorate in the National Herald money laundering case.
Wishing Sonia Gandhi a speedy recovery and earlier appearance before the ED.
— BJP Karnataka (@BJP4Karnataka) June 2, 2022
ಇದಕ್ಕೆ ತಿರೇಟು ನೀಡಿರುವ @INCKarnataka, ಒಬ್ಬರ ಅನಾರೋಗ್ಯವನ್ನು ಹಿಯಾಳಿಸುವ ವಿಕೃತಿ ಇರುವುದು @BJP4Karnataka ಪಕ್ಷಕ್ಕೆ ಮಾತ್ರ. ಸಿಡಿ ಪಕ್ಷವು ಇಡಿಯನ್ನು ಚೂ ಬಿಟ್ಟರೆ ಹೆದರುವವರು ಯಾರೂ ಇಲ್ಲ. ಹಾಗೆಯೇ ಕೋವಿಡ್ ವರದಿ ನೀಡುವುದು ನಿಮ್ಮದೇ ಸರಕಾರದ ವ್ಯವಸ್ಥೆ ಎಂಬುದು ನೆನಪಿರಲಿ. SIT ತನಿಖೆ ತಪ್ಪಿಸಲು ರಮೇಶ ಜಾರಕಿಹೊಳಿಯ ಕೋವಿಡ್ ಸೋಂಕಿನ ನಾಟಕವನ್ನು ರಾಜ್ಯ ಕಂಡಿದೆ ಎಂದಿದೆ.
ಒಬ್ಬರ ಅನಾರೋಗ್ಯವನ್ನು ಹಿಯಾಳಿಸುವ ವಿಕೃತಿ ಇರುವುದು @BJP4Karnataka ಪಕ್ಷಕ್ಕೆ ಮಾತ್ರ.
'ಸಿಡಿ' ಪಕ್ಷವು 'ಇಡಿ'ಯನ್ನು ಚೂ ಬಿಟ್ಟರೆ ಹೆದರುವವರು ಯಾರೂ ಇಲ್ಲ. ಹಾಗೆಯೇ ಕೋವಿಡ್ ವರದಿ ನೀಡುವುದು ನಿಮ್ಮದೇ ಸರ್ಕಾರದ ವ್ಯವಸ್ಥೆ ಎಂಬುದು ನೆನಪಿರಲಿ.
SIT ತನಿಖೆ ತಪ್ಪಿಸಲು ರಮೇಶ್ ಜಾರಕಿಹೊಳಿಯ ಕೋವಿಡ್ ಸೋಂಕಿನ ನಾಟಕವನ್ನು ರಾಜ್ಯ ಕಂಡಿದೆ. pic.twitter.com/rOuCCa0sN4
— Karnataka Congress (@INCKarnataka) June 2, 2022
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ