ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಮಹಾಮಾರಿ ತಡೆಗೆ ವಿಶ್ವದ ಅತಿದೊಡ್ಡ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದ್ದು, ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಲಿಸೆಕೆ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ವ್ಯಾಕ್ಸಿನೇಷನ್ ಗೆ ಮೋದಿ ಚಾಲನೆ ನೀಡಿದ್ದಾರೆ. ಈ ಮೂಲಕ ದೇಶದ 3006 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ.ರಾಜ್ಯದಲ್ಲಿ ಕೂಡ ಕರೋನಾ ಲಸಿಕೆ ನೀಡಲಾಗುತ್ತಿದ್ದು, ಮೊದಲು ಪೌರ ಕಾರ್ಮಿಕರಿಗೆ ಲಸಿಕೆ ನೀಡಲಾಗುತ್ತಿದೆ. 243 ಕೇಂದ್ರಗಳಲ್ಲಿ 24,300 ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ್ದಾರೆ.
ಪ್ರತಿ ಕೇಂದ್ರದಲ್ಲಿ ಮೊದಲಿಗೆ 100 ಜನರಿಗೆ ವೈದ್ಯರು ಲಸಿಕೆ ಹಾಕಲಿದ್ದು, 30 ನಿಮಿಷಗಳವರೆಗೆ ಲಸಿಕೆ ಪಡೆದವರ ಮೇಲೆ ನಿಗಾ ವಹಿಸಲಾಗುತ್ತಿದೆ. ಒಟ್ಟಾರೆ ಇಂದು 3 ಲಕ್ಷ ಆರೋಗ್ಯ ಸಿಬ್ಬಂದಿಗಳು ಹಾಗೂ ಮುಂಚೂಣಿ ಕೊರೊನಾ ವಾರಿಯರ್ಸ್ ಸಹಿತ 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ