ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮಹಾಮಾರಿಯಿಂದ ತತ್ತರಿಸಿದ್ದ ಇಡೀ ದೇಶದ ಜನತೆಗೆ ಶುಭ ಸುದ್ದಿ. ನಾಳೆಯಿಂದಲೇ ಕೊರೊನ ಅಲಸಿಕೆ ನೀಡಿಕೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ಅಭಿಯಾನಕ್ಕೆ ಚಾಲನೆ ನಿಡಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ರಾಜ್ಯದಲ್ಲಿ 243 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುವುದು. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಯಡಿಯೂರಪ್ಪ ಲಸಿಕೆ ನೀಡಿಕೆಗೆ ಚಾಲನೆ ನಿಡಲಿದ್ದಾರೆ. ನೋಂದಣಿ ಮಾಡಿಕೊಂಡ ಎಲ್ಲರಿಗೂ ಆಳೆ ವ್ಯಾಕ್ಸಿನ್ ನೀಡಲಾಗುತ್ತದೆ. ಒಂದು ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುವುದು. ಆರೋಗ್ಯ ಇಲಾಖೆಯ ಗ್ರೂಪ್ ಡಿ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಮೊದಲು ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ಬಗ್ಗೆ ಯಾವುದೇ ಆತಂಕ ಬೇಡ. ಲಸಿಕೆ ತೆಗೆದುಕೊಮ್ದ ಬಳಿಕ ಸೈಡ್ ಇಫೆಕ್ಟ್ ಸಹಜ. ಸ್ವಲ್ಪ ಜ್ವರ ಬರಲಿದ್ದು, ಬಳಿಕ ಸರಿ ಹೋಗಲಿದೆ. ಆದರೆ ಇದರಿಂದ ಯಾವುದೇ ತೊಂದರೆಯಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ