ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು.
ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆಯಿಂದ ನಡೆಯಲಿರುವ ವ್ಯಾಕ್ಸಿನ್ ತಾಲೀಮಿಗೆ ಎಲೆಕ್ಷನ್ ಮಾದರಿಯಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ