Latest

ಲಸಿಕೆ ಬಳಿಕವೇ ಶಾಲಾ-ಕಾಲೇಜು ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ
ರೈತರ ಬೆಳೆ ನಾಶ : ಡ್ರೋಣ್ ಮೂಲಕ ಸರ್ವೆ ಮಾಡಿಸಿದ ಅನಿಲ ಬೆನಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button