ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು ಕಂಡುಬಂದಿವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು, ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ Covid 19 ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಳಿದ 189 ಜನರನ್ನು ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯಲ್ಲಿ ಐಸೋಲೇಷನ್ನಲ್ಲಿ ಇರಿಸಿ, ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ