ಕೊಡಗು ಜಿಲ್ಲೆಯಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ಇಂದು ಕೊಡಗಿನಲ್ಲಿ ಮೊದಲ ಕೋವಿಡ್19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ ಕೋವಿಡ್19 ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಶಂಕೆ ಹಿನ್ನಾಲೆಯಲ್ಲಿ ಒಟ್ಟು 37 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 25, ಉತ್ತರ ಕನ್ನಡ ಮತ್ತು ಕಲಬುರಗಿಯಲ್ಲಿ 3, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ 2, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ತಲಾ ಒಬ್ಬೊಬ್ಬರು ದಾಖಲಾಗಿದ್ದಾರೆ. ಒಟ್ಟು ರಾಜ್ಯದಲ್ಲಿ 80 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ.

15 ಕೊರೊನಾ ಪೀಡಿತರ ಪೈಕಿ ಈಗಾಗಲೇ ಮೊದಲ ರೋಗಿಯಾಗಿ ದಾಖಲಾಗಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಗುಣಮುಖರಾಗಿದ್ದಾರೆ. ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟು 11 ಮಂದಿ ಕೊರೊನಾ ಪೀಡಿತರಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button