Latest

ಕೈಯಲ್ಲಿ ಕ್ವಾರಂಟೈನ್ ಸೀಲ್; ಮೆಜಸ್ಟಿಕ್ ನಲ್ಲಿ ಓಡಾಡಿದ ದಂಪತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಬಸ್, ರೈಲು, ವಿಮಾನ ಸಂಚಾರ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದ ಜನರು ಕೈಗೆ ಸೀಲ್ ಹಾಕಿದ್ದರೂ ಕೂಡ ರಸ್ತೆಗಳಲ್ಲಿ ಆರಾಮವಾಗಿ ಓಡಾಡುತ್ತಿದ್ದು, ಜನರಲ್ಲಿ ಇನ್ನಷ್ಟು ಆತಂಕ ಹೆಚ್ಚಿಸಿದೆ.

ಹೈದರಾಬಾದ್‍ನಿಂದ ಬಂದಿರುವ ದಂಪತಿ ಕ್ವಾರಂಟೈನ್ ಸೀಲ್ ಇದ್ದರೂ ಮೆಜೆಸ್ಟಿಕ್‍ನಲ್ಲಿ ಓಡಾಡಿದ್ದಾರೆ. ಚಿತ್ರದುರ್ಗಕ್ಕೆ ತೆರಳಲು ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಓಡಾಟ ನಡೆಸಿದ್ದಾರೆ. ಈ ವೇಳೆ ದಂಪತಿ ಕೈಯಲ್ಲಿ ಸೀಲ್‍ನೋಡಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಗಾಬರಿಗೊಳಗಾಗಿದ್ದಾರೆ. ಕೊನೆಗೆ ಆಟೋ ಮೂಲಕ ಜಯನಗರಕ್ಕೆ ತೆರಳುವಂತೆ ಹೇಳಿದ್ದಾರೆ.

ಇನ್ನೊಂದೆಡೆ ಮತ್ತೊಬ್ಬ ಹೋಮ್ ಕ್ವಾರಟೈನ್ ಕೂಡ ಮೆಜೆಸ್ಟಿಕ್ ನಲ್ಲಿ ಓಡಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದಾನೆ. ಉತ್ತರ ಪ್ರದೇಶದಿಂದ ರೈಲಿನಲ್ಲಿ ಬಂದಿರುವ ವ್ಯಕ್ತಿ ಕೈಗೆ ಕ್ವಾರಂಟೈನ್ ಸೀಲ್ ಇದ್ದರೂ ಬಾಗಲಕೋಟೆ ಬಸ್ ಗಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ. ಬಸ್ ಹತ್ತಲು ಬಂದಾಗ ಆತನ ಕೈಯಲ್ಲಿ ಕ್ವಾರಂಟೈನ್ ಸೀಲ್ ನೋಡಿದ ಕೆಎಸ್ ಆರ್ ಟಿಸಿ ಸಿಬ್ಬಂದಿ ಖಾಸಗಿ ವಾಹನದಲ್ಲಿ ತೆರಳುವಂತೆ ಹೇಳಿ ಕಳುಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button