ಕೊರೊನಾ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರಣಾಂತಿಕ ಕೊರೋನಾ ವೈರಸ್ ಎದುರಿಸಲು ರಾಜ್ಯ ಸರ್ಕಾರ ಸನ್ನದ್ದವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಇಂದು ವಿಧಾನ ಪರಿಷತ್ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಕೊರೋನಾ ವಿರುದ್ಧ ಹೋರಾಟಕ್ಕೆ ರಾಜ್ಯ ಸರ್ಕಾರ ಸಿದ್ದವಿದೆ. ಅದಕ್ಕಾಗಿ ಈಗಾಗಲೇ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 186 ಕೋಟಿ ರೂ. ಹಣ ಬಂದಿದೆ ಎಂದರು.

ರಾಜ್ಯದಲ್ಲಿ ಕೊರೋನಾ ಪೀಡಿತರಿಗಾಗಿ 2000 ಬೆಡ್​​ ಮೀಸಲಿಡಲಾಗಿದೆ. 10 ಸಾವಿರ ಜನಕ್ಕೆ ಕೊರೋನಾ ಬಂದರೂ ಅದನ್ನು ನಿಯಂತ್ರಿಸಲು ಬೇಕಾದಷ್ಟು ಸಾಮರ್ಥ್ಯ ಹೊಂದಿರುವ ಕೇಂದ್ರಗಳನ್ನು ತೆರೆದಿದ್ದೇವೆ. ಹೋಮ್​​​ ಕ್ವಾರಂಟೇನ್​​ ಮೇಲೂ ನಿಗಾ ವಹಿಸಿದ್ದೇವೆ. 1 ಲಕ್ಷ ಜನರಿಗೆ ಸಮಸ್ಯೆ ಆಗದ ರೀತಿಯಲ್ಲಿ ಮುಂಜಾಗೃತ ಕ್ರಮ ತೆಗೆದುಕೊಂಡಿದ್ದೇವೆ. ಹಾಗಾಗಿ ಯಾರು ಕೊರೊನಾಗೆ ಹೆದರಬೇಕಿಲ್ಲ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ನಮ್ಮೊಂದಿಗೆ ಕೈಜೋಡಿಸಲಿದ್ದು, ಶೇ.30ರಷ್ಟು ವೆಂಟಿಲೇಟರ್​​ಗಳನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ. 1000 ವೆಂಟಿಲೇಟರ್​​ಗಳನ್ನು ಈಗಾಗಲೇ ಆರ್ಡರ್​ ಮಾಡಿದ್ದೇವೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 700 ವೆಂಟಿಲೇಟರ್​​ಗಳು ಇವೆ. ಇನ್ನೊಂದಷ್ಟು ಆರ್ಡರ್​​ ಮಾಡಿದ್ದೇವೆ. ನಿನ್ನೆ ಮಧ್ಯಾಹ್ನದಿಂದ ಇಂದು ಮಧ್ಯಾಹ್ನದೊಳಗೆ ಕರ್ನಾಟಕದಲ್ಲಿ 5 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಎಂದರು ವಿವರಿಸಿದರು.

Home add -Advt

Related Articles

Back to top button