ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 1.50ಲಕ್ಷದ ಗಡಿ ದಾಟಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 21,411 ಪ್ರಕರಣಗಳು ಮತ್ತು 67 ಸಾವುಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್-19 ಸಾವಿನ ಸಂಖ್ಯೆ 5,25,997 ಕ್ಕೆ ಏರಿಕೆಯಾಗಿದೆ.
ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.50 ಲಕ್ಷದ ಗಡಿ ದಾಟಿದೆ. ದೇಶಾದ್ಯಂತ 21,880 ಪ್ರಕರಣಗಳು ದಾಖಲಾದ ಒಂದು ದಿನದ ನಂತರ ಈ ವರದಿ ಬಂದಿದೆ.
ಇದೇ ವೇಳೆ ಬೆಂಗಳೂರಿನಲ್ಲಿ 1,244 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,355 ಆಗಿದ್ದು, ಸೋಂಕಿನ ಧನಾತ್ಮಕ ಪ್ರಮಾಣ ಶೇ. 6.63 ರಷ್ಟಿದೆ. ಈ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ನಗರದಲ್ಲಿ ಇದುವರೆಗೆ ಸುಮಾರು ಎರಡು ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಎಂದು ಅವರು ಹೇಳಿದ್ದಾರೆ.
ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಮಹಿಳಾ ಜಾವೆಲಿನ್ ಥ್ರೋನಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ ಅನ್ನುರಾಣಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ