ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಲಾಕ್ ಡೌನ್ ನಿಂದಾಗಿ ಅದೆಷ್ಟೂ ಜನರು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವರಿಗೆ ಮಹಾಮಾರಿ ಕೊರೊನಾ ಬಾರದಂತೆ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ ಆತಂಕಕ್ಕೆ ಇದ್ದರೆ, ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ ಕುಡಿಯೋದು ಹೇಗೆ ಎಂಬ ಚಿಂತೆಯಾಗಿದೆ.
ಲಾಕ್ ಡೌನ್ ನಿಂದ ಮದ್ಯದಂಗಡಿಗಳು ಬಂದ್ ಇರುವುದರಿಂದ ಕುಡುಕರಿಗೆ ಎಣ್ಣೆ ಸಿಗದೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಈಗಾಗಲೇ 3 ಸಾವನ್ನಪ್ಪಿದ್ದಾರೆ. ಈ ನಡುವೆ ಲಾಕ್‍ಡೌನ್ ನಿಂದ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂವರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮದ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಲ್ಲೆಕುಪ್ಪ ಗ್ರಾಮದ ಎಂ.ಶಂಕರ (36) ಮದ್ಯೆ ಸಿಗದೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ 30 ವರ್ಷದ ಆನಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ.
ಉಡುಪಿ ಜಿಲ್ಲೆ ಒಂದರಲ್ಲೇ ಆರು ಮಂದಿ ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಹುಬ್ಬಳ್ಳಿ ಮತ್ತು ಬೀದರ್ ನಲ್ಲಿ ತಲಾ ಒಬ್ಬೊಬ್ಬರು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಮುಳಬಾಗಿಲಿನ ಮುದಿಗೆರೆ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ.
ರಾಜ್ಯದ ಸ್ಥಿತಿ ಹೀಗಿದ್ದರೆ ಇನ್ನು ಕೇರಾಳದಾಲ್ಲಿ ಕುಡುಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್, ವೈದ್ಯರ ಚೀಟಿ ತಂದರೆ ಮದ್ಯ ವಿತರಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ