Latest

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 1,12,359ಕ್ಕೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 1,12,359ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 5,609 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 137 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 3,435 ಮಂದಿ ಬಲಿಯಾಗಿದ್ದಾರೆ. ಒಟ್ಟು 45,310 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 63,624 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಅತೀ ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಈವರೆಗೆ 39,297 ಮಂದಿ ಸೋಂಕಿಗೆ ತುತ್ತಾಗಿದ್ದು, 1,390 ಮಂದಿ ಕೊರೊನಾಗೆ ಬಲಿಯಾಗಿದ್ದು, 10,318 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೆ 13,191 ಮಂದಿಗೆ ಕೊರೊನಾ ತಗುಲಿದ್ದು, 88 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇತ್ತ ಗುಜರಾತ್‍ನಲ್ಲಿ 12,539 ಮಂದಿ ಸೋಂಕಿಗೆ ತುತ್ತಾಗಿದ್ದು, 749 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 11,088 ಮಂದಿ ಕೊರೊನಾಗೆ ತುತ್ತಾಗಿದ್ದು, 176 ಮಂದಿ ಮೃತಪಟ್ಟಿದ್ದಾರೆ. ಸುಮಾರು 5,192 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ರಾಜಸ್ಥಾನದಲ್ಲಿ 6,015 ಮಂದಿಗೆ ಸೋಂಕು ತಗುಲಿದ್ದು, 147 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 5,735 ಮಂದಿ ಸೋಂಕಿಗೆ ತುತ್ತಾಗಿದ್ದು, 267 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 5,175ಕ್ಕೆ ಏರಿಕೆಯಾಗಿದ್ದು, 127 ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ 2,560 ಮಂದಿಗೆ ಸೋಂಕು ತಗುಲಿದ್ದು, 53 ಮಂದಿ ಸಾವನ್ನಪ್ಪಿದ್ದಾರೆ. 1,664 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,661 ಮಂದಿ ಕೊರೊನಾಗೆ ತುತ್ತಾಗಿದ್ದು, 38 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 667 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 502 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ 1,462 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 41ಕ್ಕೆ ಏರಿದೆ. ಒಟ್ಟು 556 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತ ಸಂಖ್ಯೆ 250ಕ್ಕೆ ಏರಿದೆ. ಬುಧವಾರ ಒಂದೇ ದಿನ 67 ಸೋಂಕಿತ ಪ್ರಕರಣ ವರದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button