Latest

ದೇಶದಲ್ಲಿ 3 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ಪೀಡಿತರ ಸಂಖ್ಯೆ ಈಗ 3 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 11 ಸಾವಿರಕ್ಕೂ ಹೆಚ್ಚು‌ ಸೋಂಕು ಪೀಡಿತರು ಪತ್ತೆಯಾಗಿದ್ದು, 11,458 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 3,08,993ಕ್ಕೆ ಏರಿಕೆಯಾಗಿದೆ.

Home add -Advt

ಒಂದೇ ದಿನ ಕೊರೋನಾದಿಂದ 386 ಜನ ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 8,884ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 1,54,330 ಜನ ಮಾತ್ರ ಗುಣಮುಖರಾಗಿದ್ದಾರೆ. 1,45,779 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Related Articles

Back to top button