ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಶರವೇಗದಲ್ಲಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ಈಗ ಪ್ರತಿದಿನ 11 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಒಂದೇ ದಿನದಲ್ಲಿ 11,502 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 3,32,424ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾದಿಂದ 325 ಜನ ಮೃತಪಟ್ಟಿದ್ದು, ದೇಶದ ಕೊರೋನಾದಿಂದ ಸತ್ತವರ ಸಂಖ್ಯೆ 9,520ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 1,69,798 ಜನ ಮಾತ್ರ ಗುಣಮುಖ ಆಗಿದ್ದಾರೆ. 1,53,106 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಭಾರತದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು, ಜೂನ್ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು, ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ