Latest

ಮತ್ತೆ 1,41,986 ಜನರಲ್ಲಿ ಕೊರೊನಾ ಸೋಂಕು ಪತ್ತೆ; ದೇಶಾದ್ಯಂತ ಹೆಚ್ಚಿದ ಒಮಿಕ್ರಾನ್ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ಮತ್ತೆ 1,41,986 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ.

24 ಗಂಟೆಯಲ್ಲಿ 285 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483463 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 472169 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40895 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು ಹಾಗೂ ಕರ್ನಾಟಕ ಈ 5 ರಾಜ್ಯದಲ್ಲಿಯೇ ಅತಿಹೆಚ್ಚು ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 40,925 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ 18,213, ದೆಹಲಿ 17,335, ತಮಿಳುನಾಡು 8,981 ಹಾಗೂ ಕರ್ನಾಟಕದಲ್ಲಿ 8,449 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು ದೇಶದಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕಿತರ ಸಂಖ್ಯೆ 3,071ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿಯೇ 876 ಪ್ರಕರಣ ದಾಖಲಾಗಿದ್ದು, ಕರ್ನಾಟಕದಲ್ಲಿ 333 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ.

Home add -Advt

Related Articles

Back to top button