Latest

ದೇಶದಲ್ಲಿ 14,516 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ಸಡಿಲಿಕೆಯ ಬಳಿಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 4 ಲಕ್ಷ ಗಡಿ ಸಮೀಪಿಸಿದೆ. ಕಳೆದ 24 ಗಂಟೆಯಲ್ಲಿ 14,516 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 3,95,048ಕ್ಕೆ ಏರಿಕೆಯಾಗಿದೆ.

ಒಂದೇ ದಿನ 375 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,948ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 2,13,831 ಜನ ಮಾತ್ರ. ದೇಶದಲ್ಲಿ ಇನ್ನೂ 1,68,269 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಭಾರತದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು, ಜೂನ್‌ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು, ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ತಿದಿನ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button