Latest

ಒಂದೇ ದಿನ 14,821 ಹೊಸ ಕೊರೊನಾ ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 14,821 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 445 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 13699ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,37,196 ಜನ ಮಾತ್ರ. ದೇಶದಲ್ಲಿ ಇನ್ನೂ 1,74,387 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Home add -Advt

ದೇಶದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದರೆ, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು ಪತ್ತೆಯಾಗುತ್ತಿವೆ.

Related Articles

Back to top button