ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಹೊಸ 15 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಕೊರೋನಾ ವೈರಸ್ನಿಂದ ಈಗಾಗಲೇ 6 ಜನ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಮತ್ತೆ 15 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹುಬ್ಬಳ್ಳಿಯಲ್ಲಿ 4, ಮಂಡ್ಯದ ಮಳವಳ್ಳಿಯಲ್ಲಿ 3, ಬಾಗಲಕೋಟೆಯ ಮುಧೋಳದಲ್ಲಿ 1, ಬೀದರ್ನಲ್ಲಿ 2, ಬೆಳಗಾವಿಯಲ್ಲಿ 3, ದೊಡ್ಡಬಳ್ಳಾಪುರದಲ್ಲಿ 1 ಹಾಗೂ ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೋನಾ ವೈರಸ್ ಇರುವುದು ಖಚಿತವಾಗಿದೆ.
ಒಟ್ಟು 247 ಸೋಂಕಿತರಲ್ಲಿ ಈಗಾಗಲೇ 59 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 182 ಜನರು ಕೊರೋನಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 6 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ