Latest

1,68,912 ಜನರಲ್ಲಿ ಸೋಂಕು ಪತ್ತೆ; ಕೇಂದ್ರ ಆರೋಗ್ಯ ಇಲಾಖೆ ತಜ್ಞರ ತಂಡ ರಾಜ್ಯಕ್ಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,68,912 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,35,27,717ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 904 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ. ಈನಡುವೆ ಮಹಾರಷ್ಟ್ರ, ಪಂಜಾಬ್ ಹಾಗೂ ಛತ್ತೀಸ್ ಘಡದಲ್ಲಿ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೂಚನೆ ಮೇರೆಗೆ ಕೇಂದ್ರ ಆರೋಗ್ಯ ಇಲಾಖೆಯ ತಜ್ಞರ ತಂಡ ಈ ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ.

ಈ ರಾಜ್ಯಗಳಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆರ್ ಟಿಪಿಸಿಆರ್ ಪರೀಕ್ಷೆ ಸಮಸ್ಯೆ, ಲಸಿಕೆ ಕೊರತೆ ಉಂಟಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಮೊದಲು ಈ ಮೂರು ರಾಜ್ಯಗಳಿಗೆ ಭೇಟಿ ನೀಡಲಿರುವ ತಜ್ಞರ ತಂಡ ಪರಿಸ್ಥಿತಿಯ ವಾಸ್ತವತೆಯನ್ನು ಅರಿತು ಕೇಂದ್ರಕ್ಕೆ ವರದಿ ನೀಡಲಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button