Latest

ರಾಜ್ಯದಲ್ಲಿ 176 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಒಂದೇ ದಿನ 176 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 86 ಜನರು ಸಾವನ್ನಪ್ಪಿದ್ದಾರೆ.

ಇಂದು ಬೆಂಗಳೂರು ನಗರ 42, ಯಾದಗಿರಿ 22, ಬೀದರ್ 20, ರಾಮನಗರ 19, ಕಲಬುರಗಿ 13, ಧಾರವಾಡ 1೦, ಕೋಲಾರ 7, ಉತ್ತರ ಕನ್ನಡ 6, ಬಳ್ಳಾರಿ 8, ದಕ್ಷಿಣ ಕನ್ನಡ 5, ಮಂಡ್ಯ 5, ಬಾಗಲಕೋಟೆ 4, ರಾಮನಗರ 3, ರಾಯಚೂರು 2, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಹಾಸನ, ವಿಜಯಪುರ ತಲಾ ಒಂದು ಕೇಸ್ ಪತ್ತೆಯಾಗಿದೆ

2956 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ವರೆಗೆ ರಾಜ್ಯದಲ್ಲಿ 3929 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button