Latest

ಐದುವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐದೂವರೆ ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 18,522 ಜನರಲ್ಲಿ ಕೊರೊನಾ ಸೋಂಕು ಹರಡಿದೆ.

ಒಂದೇ ದಿನ 418 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 16,893ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 3,34,822 ಜನ ಮಾತ್ರ. ದೇಶದಲ್ಲಿ ಇನ್ನೂ 2,15,125 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Home add -Advt

ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಜೂನ್ 12ರಂದು 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಂದು 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಂದು 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಂದು 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಂದು 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಂದು 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 25ರಂದು 17 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 26ರಂದು 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಇದೇ ಟ್ರೆಂಡ್ ಮುಂದುವರೆದಿದ್ದು ಜೂನ್ 29ರಂದು 18,522 ಪ್ರಕರಣಗಳು ಕಂಡುಬಂದಿವೆ. ದೇಶದ ಕೊರೋನಾ ಪೀಡಿತರ ಸಂಖ್ಯೆ 5,66,840ಕ್ಕೆ ಏರಿಕೆಯಾಗಿದೆ.

Related Articles

Back to top button