Latest

ದೇಶದಲ್ಲಿ 6 ಲಕ್ಷ ಗಡಿ ದಾಟಿದ ಕೊರೊನಾ ಪೀಡಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಕಳೆದ 24 ಗಂಟೆಯಲ್ಲಿ 19,148 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿ ದಾಟಿದೆ.

ಇದಲ್ಲದೆ ಒಂದೇ ದಿನ 434 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 17,834ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 3,59,860 ಜನ ಮಾತ್ರ. ದೇಶದಲ್ಲಿ ಇನ್ನೂ 2,26,947 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Home add -Advt

ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಕೋವಿಡ್​ ಪ್ರಕರಣಗಳು ವರದಿಯಾಗತೊಡಗಿವೆ. ಜುಲೈ 1ರಂದು 19,148 ಪ್ರಕರಣಗಳು ಕಂಡುಬಂದಿದ್ದು, ಈ ಮೂಲಕ ದೇಶದ ಕೊರೊನಾ ಪೀಡಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ.

Related Articles

Back to top button