
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ವಿವಿಗಳ 20 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎಂ.ಇಂದಿರೇಶ್ ಮಾಹಿತಿ ನೀಡಿದ್ದು, ವಿಶ್ವ ವಿದ್ಯಾಲಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗು ಏಪ್ರಿಲ್ 20ರವರೆಗೆ ಆಫ್ ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ, ಬೀದರ್, ಶಿಸರಿ, ಬೆಂಗಳೂರಿನ ತೋಟಗಾರಿಕಾ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿದೆ.
ಲಾಕ್ ಡೌನ್: ಸಿಎಂ ಯಡಿಯೂರಪ್ಪ ಸ್ಪಷ್ಟನೆ