Latest

ರಾಜ್ಯದಲ್ಲಿ ಹೊಸದಾಗಿ 213 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 213 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7,213ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಲಬುರಗಿ 48, ಬೆಂಗಳೂರು ನಗರ 35, ಧಾರವಾಡ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ 3, ಬಾಗಲಕೋಟೆ 3, ಶಿವಮೊಗ್ಗ 3, ಉಡುಪಿ 2, ಹಾವೇರಿ 2, ರಾಮನಗರ 2, ಹಾಸನ 1 ಮತ್ತು ದಾವಣಗೆರೆಯಲ್ಲಿ 1 ಪ್ರಕರಣ ದಾಖಲಾಗಿದೆ.

Home add -Advt

ಇಂದು ಪತ್ತೆಯಾದ 213 ಪ್ರಕರಣಗಳ ಪೈಕಿ 103 ಮಂದಿ ಅಂತರಾಜ್ಯ ಹಾಗೂ 23 ಮಂದಿಗೆ ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 180 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Related Articles

Back to top button