
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.
ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ 1, ಹಾವೇರಿಯಲ್ಲಿ 1, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ