ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಜನರ ಆತಂಕವನ್ನು ಇನ್ನಷ್ಟು ಹೆಚ್ಚುವಂತೆ ಮಾಡುತ್ತಿದೆ. ಪ್ರಸ್ತುತ ದೇಶದಲ್ಲಿ ಮಾಹಾಮಾರಿಯಿಂದ ಬಳಲುತ್ತಿರುವವರ ಸಂಖ್ಯೆ ಬರೋಬ್ಬರಿ 7 ಲಕ್ಷ ದಾಟಿದೆ.
ಕಳೆದ 24 ಗಂಟೆಯಲ್ಲಿ 22,252 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 7,19,665ಕ್ಕೆ ಏರಿಕೆಯಾಗಿದೆ. ಜುಲೈ 4ರಿಂದ 23-24 ಸಾವಿರ ಪ್ರಕರಣ ಪತ್ತೆಯಾಗಿದ್ದವು. ಇದೀಗ 22,252 ಪ್ರಕರಣ ಪತ್ತೆಯಾಗಿರುವುದು ಕೊಂಚ ನಿಟ್ಟುಸಿರು ಬಿಡುವಂತಿದ್ದರೂ ಒಮ್ಮೆಲೇ ಹೆಚ್ಚುವ ಸಾಧ್ಯತೆಯೂ ಇದೆ.
ಇದಲ್ಲದೆ ಸೋಮವಾರ 467 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 20 ಸಾವಿರ ದಾಟಿದ್ದು 20,160ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 4,39,948 ಜನ ಮಾತ್ರ. ದೇಶದಲ್ಲಿ ಇನ್ನೂ 2,59,557 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ