Latest

ಬೆಳಗಾವಿಯಲ್ಲಿ 38 ಜನರಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 239 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಲಬುರಗಿ 39, ಯಾದಗಿರಿ 39, ಬೆಳಗಾವಿ 38, ಬೆಂಗಳೂರು ನಗರ 24, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

Home add -Advt

ಇನ್ನು ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಬೆಂಗಳೂರಿನಲ್ಲಿ 61 ವರ್ಷದ ಹಿರಿಯ ಮಹಿಳೆ ಹಾಗೂ 65 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಮಹಿಳೆ ಉಸಿರಾಟದ ಸಮಸ್ಯೆ ಹಾಗೂ ಹೈಪೋ ಥೈರಾಯ್ಡ್ ನಿಂದ ಬಳಲುತ್ತಿದ್ದರೆ, ವೃದ್ಧ ಮಧುಮೇಹ, ರಕ್ತದೊತ್ತಡ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

Related Articles

Back to top button