ಇಂದು ಒಂದೇ ದಿನದಲ್ಲಿ 24 ಜನರಲ್ಲಿ ಕೊರೊನಾ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 24 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಒಂದೇ ದಿನದಲ್ಲಿ 24 ಕೊರೊನಾ ಪ್ರಕರಣ ಪತ್ತೆಯಾಗಿದೆ. 589 ಸೋಂಕಿತರ ಪೈಕಿ 251 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

ಮಂಡ್ಯದಲ್ಲಿ ಅತಿಹೆಚ್ಚು ಕೊರೋನಾ ಕೇಸುಗಳು ಪತ್ತೆಯಾಗಿವೆ. ಮಂಡ್ಯದಲ್ಲಿ 8,ದಾವಣಗೆರೆ 6, ಬೆಳಗಾವಿಯಲ್ಲಿ 3, ದಕ್ಷಿಣ ಕನ್ನಡ 2, ಕಲಬುರಗಿ, ವಿಜಯಪುರದಲ್ಲಿ ತಲಾ 1, ಚಿಕ್ಕಬಳ್ಳಾಪುರ,ಧಾರವಾಡದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊರೋನಾ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

Related Articles

Back to top button