Latest

ರಾಜ್ಯದಲ್ಲಿ ಮತ್ತೆ ದ್ವಿಶತಕ ಸಿಡಿಸಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು ಕೊರೊನಾ ಪಾಸಿಟೀವ್ ಕೇಸ್ ಪತ್ತೆಯಾಗಿದ್ದು, 248 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ದಾವಣಗೆರೆ, ವಿಜಯಪುರ, ಹಾಸನ ಜಿಲ್ಲೆಯಲ್ಲಿ ತಲಾ 4, ತುಮಕೂರು, ಚಿಕ್ಕಮಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ತಲಾ ಇಬ್ಬರಿಗೆ, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

Home add -Advt

ರಾಜ್ಯದಲ್ಲಿ ಇಂದು ಸೋಂಕು ದೃಢಪಟ್ಟ 248 ಜನರ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ರಾಯಚೂರು, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

Related Articles

Back to top button