ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ, ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿದ್ದು, ಈವರಗೆ 22 ಜನರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೊರೊನಾ ತಪಾಸಣೆಗೆಂದು ಲ್ಯಾಬ್ ಗಳ ಸಂಖ್ಯೆಯನ್ನು ಹೆಚ್ಚಿಸಿದೆ.
ಕೊರೋನಾ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಗದಗ, ವಿಜಯಪುರ, ತುಮಕೂರು ಸೇರಿದಂತೆ ಒಟ್ಟು 26 ಲ್ಯಾಬ್ಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಫೆಬ್ರವರಿಯಲ್ಲಿ ಕೊರೋನಾ ಪರೀಕ್ಷೆಗೆಂದು 2 ಲ್ಯಾಬ್ಗಳಿದ್ದವು. ಈಗ ಒಟ್ಟು 26 ಲ್ಯಾಬ್ಗಳು ಕಾರ್ಯ ನಿರ್ವಹಿಸುತ್ತಿವೆ. ಒಂದು ದಿನಕ್ಕೆ 5 ಸಾವಿರ ಕೊರೋನಾ ಪರೀಕ್ಷಾ ಸಾಮರ್ಥ್ಯವನ್ನು ಕರ್ನಾಟಕದ ಆಸ್ಪತ್ರೆ ಮತ್ತು ಲ್ಯಾಬ್ಗಳು ಹೊಂದಿವೆ. ಮೇ ಅಂತ್ಯಕ್ಕೆ 60 ಲ್ಯಾಬ್ ಹೊಂದುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಸಾಕಷ್ಟು ಕ್ರಮ ಕೈಗೊಳ್ಳಲಾಗಿದ್ದು, ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಕೂಡ ನೇಮಕ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ